February 4, 2026

ಮಂಗಳೂರು: ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ವಿನೂತನ ಪ್ರತಿಭಟನೆ: ರಸ್ತೆಯಲ್ಲೇ ಸ್ಟೌವ್-ಕಟ್ಟಿಗೆ ಬಳಸಿ ಚಪಾತಿ ತಯಾರಿ

0
IMG-20230304-WA0020.jpg

ಮಂಗಳೂರು: ಕೇಂದ್ರ ಸರಕಾರವು ಅಡುಗೆ ಅನಿಲ ದರವನ್ನು ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಂಪನಕಟ್ಟೆಯಲ್ಲಿರುವ ವಿಧಾನ ಸೌಧದ ಮುಂದೆ ಶನಿವಾರ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಈ ಸಂದರ್ಭ ಪಕ್ಷದ ಕಾರ್ಯಕರ್ತೆಯರು ಸ್ಟೌವ್-ಕಟ್ಟಿಗೆ ಬಳಸಿ ಚಪಾತಿ ತಯಾರಿಸಿ ಬಿಜೆಪಿ ಸರಕಾರಕ್ಕೆ ಧಿಕ್ಕಾರ ಕೂಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಚಪಾತಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಕಟ್ಟಿಗೆಯನ್ನು ಕಳುಹಿಸಿಕೊಡುವ ಕಾಲ ಬಂದಿದೆ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಐವನ್ ಡಿಸೋಜ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಇನಾಯತ್ ಅಲಿ, ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹಾಗೂ ಮತ್ತಿತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!