August 13, 2026

ಮಂಗಳೂರು: ಮಗುವಿನೊಂದಿಗೆ ಮಹಿಳೆ ಆತ್ಮಹತ್ಯೆ ಪ್ರಕರಣ: ಪ್ರಚೋದನೆ ನೀಡಿದ ಆರೋಪಿಯ ಬಂಧನ

0
IMG-20230305-WA0000.jpg

ಮಂಗಳೂರು: 33 ವರ್ಷದ ಮಹಿಳೆ ಹಾಗೂ ಆಕೆಯ ನಾಲ್ಕು ವರ್ಷದ ಮಗಳ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಆರೋಪಿ ಕೇಶವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬರ್ಕೆ ಪೊಲೀಸ್‌ ಠಾಣಾ ವ್ಯಾಪ್ತಿಯ ಕೊಡಿಯಾಲಗುತ್ತು ಪರಿಸರದ ಮನೆಯೊಂದರಲ್ಲಿ ಮಾರ್ಚ್ 1 ರಂದು ತನ್ನ ಪುತ್ರಿಯೊಂದಿಗೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು.

ಮಹಿಳೆ ಮತ್ತು ಆಕೆಯ ಮಗಳ ಆತ್ಮಹತ್ಯೆಯ ನಂತರ ಪೊಲೀಸರು ಕೇಶವ ಸೇರಿದಂತೆ ಮೂವರ ವಿರುದ್ಧ ಐಪಿಸಿ ಸೆಕ್ಷನ್ 306 (‘ಆತ್ಮಹತ್ಯೆಗೆ ಪ್ರಚೋದನೆ’) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಇನ್ನು ಪೊಲೀಸರು ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದಲ್ಲಿ ಇತರ ಇಬ್ಬರು ಆರೋಪಿಗಳಾದ ಬಾಬು ಮತ್ತು ಮಮತಾ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಬಂಧನವನ್ನು ಖಚಿತಪಡಿಸಿದ್ದಾರೆ.

ವಿಜಯಾ ಎಂದು ಗುರುತಿಸಲಾಗಿರುವ ಮಹಿಳೆ ತನ್ನ ಮಗಳು ಶೋಬಿಕಾ ಮತ್ತು 12 ವರ್ಷದ ಮಗುವಿನೊಂದಿಗೆ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Leave a Reply

Your email address will not be published. Required fields are marked *

You may have missed

error: Content is protected !!