February 4, 2026

ಮಂಗಳೂರು ಕುಕ್ಕರ್ ಸ್ಪೋಟ ಹೊಣೆ ಹೊತ್ತುಕೊಂಡ ಐಸಿಸ್ ಉಗ್ರ ಸಂಘಟನೆ

0
IMG-20230305-WA0023.jpg

ಮಂಗಳೂರು: ನವೆಂಬರ್ ನಲ್ಲಿ ಮಂಗಳೂರು ಕಂಕನಾಡಿ ಬಳಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಹೊಣೆಯನ್ನು ಉಗ್ರ ಸಂಘಟನೆ ಐಸಿಸ್ ಹೊತ್ತುಕೊಂಡಿದೆ ಎಂದು ವರದಿ ತಿಳಿಸಿದೆ.

ಕಳೆದ ವರ್ಷ ತಮಿಳುನಾಡಿನ ಕೊಯಂಬತ್ತೂರು ಮತ್ತು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನೂ ಐಎಸ್‌ಗೆ ಸೇರಿದ ಉಗ್ರರು ನಡೆಸಿದ್ದರು ಎಂದು ಹೇಳಿಕೊಂಡಿದೆ.

ಇನ್ನು ಇಸ್ಲಾಮಿಕ್ ಸ್ಟೇಟ್ ವಿಲಾಯಾ ಖೋರಾಸಾನ್ ತನ್ನ ವಾಯ್ಸ್ ಆಫ್ ಖೋರಾಸಾನ್ ನಿಯತಕಾಲಿಕೆಯ 23ನೇ ಸಂಚಿಕೆಯಲ್ಲಿ, ಕಳೆದ ವರ್ಷ ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟವನ್ನು ಐಎಸ್ ಅಂಗಸಂಸ್ಥೆ ಉಗ್ರಗಾಮಿಗಳು ನಡೆಸಿದೆ ಎಂದು ಹೇಳಿಕೊಂಡಿರುವುದಾಗಿ ವರದಿಯಾಗಿದೆ.

ಮಂಗಳೂರಿನಲ್ಲಿ ನಡೆದ ಸ್ಫೋಟವು ಆಕಸ್ಮಿಕವಲ್ಲ. ಇದು ಭಯೋತ್ಪಾದನಾ ಕೃತ್ಯ ಎಂದು ರಾಜ್ಯದ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಆ ಸಮಯದಲ್ಲೇ ಸ್ಪಷ್ಟಪಡಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!