ಬಂಟ್ವಾಳ: ಮನೆ ಮತ್ತು ಅಂಗಡಿಗಳಿಗೆ ದಿಢೀರ್ ದಾಳಿ ನಡೆಸಿದ NIA: ಐವರು ವಶಕ್ಕೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ಎನ್‌ಐಎ ಅಧಿಕಾರಿಗಳು ದಿಡೀರ್ ದಾಳಿ ನಡೆಸಿ, ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಫಾಜ್ ನವಾಜ್ ಹಾಗೂ ನೌಫಲ್ ಮನೆಗೆ ದಾಳಿ ನಡೆಸಿ ತೀವ್ರ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದ್ದು, ಜತೆಗೆ ಪಾಣೆಮಂಗಳೂರು ಹಾಗೂ ಮೆಲ್ಕಾರಿನ ಸೈಬರ್ ಕೆಫೆಗಳಿಗೂ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿದೆ.
ಭಾನುವಾರ ಮಧ್ಯಾಹ್ನ 3ರ ಸುಮಾರಿಗೆ ಸುಮಾರು ಮೂರು ಪೊಲೀಸ್ ವಾಹನಗಳೊಂದಿಗೆ ದೆಹಲಿಯಿಂದ ಆಗಮಿಸಿದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪಾಣೆಮಂಗಳೂರು ಮತ್ತು ಮೆಲ್ಕಾರ್ ಪ್ರದೇಶದಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಯಾವ ಕಾರಣಕ್ಕಾಗಿ ದಾಳಿ ನಡೆಸಲಾಗಿದೆ ಎಂಬ ಬಗ್ಗೆ ಸ್ಥಳೀಯ ಪೊಲೀಸರಾಗಲೀ, ಉನ್ನತಾಧಿಕಾರಿಗಳಾಗಲಿ ಮಾಹಿತಿ ನೀಡಿಲ್ಲ. ದಾಳಿಯ ಕುರಿತು ಇನ್ನಷ್ಟು ವಿವರಗಳು ತನಿಖೆಯ ಬಳಿಕವೇ ಹೊರಬರಬೇಕಿದೆ.




