May 14, 2026

ಜೆಡಿಎಸ್ ಪಂಚರತ್ನ ಪ್ರಚಾರದ ವಾಹನಕ್ಕೆ ಕಲ್ಲುತೂರಾಟ

0
image_editor_output_image754950880-1678078075834.jpg

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ದೇವತಗಲ್ ಗ್ರಾಮದಲ್ಲಿ ಜೆಡಿಎಸ್ ಪಂಚರತ್ನ ಪ್ರಚಾರದ ವೇಳೆ ಗಲಾಟೆ ನಡೆದಿದೆ.

ಜೆಡಿಎಸ್ ಪ್ರಚಾರದ ಸ್ಕ್ರೀನ್ ವಾಹನದ ಮೇಲೆ ಕಲ್ಲುತೂರಾಟ ನಡೆದಿದ್ದು, ಚಾಲಕನ ತಲೆಗೆ ಗಾಯವಾಗಿದೆ.

ದೇವತಗಲ್ ಗ್ರಾಮದಲ್ಲಿ ಜೆಡಿಎಸ್ ಪ್ರಚಾರ ಮಾಡದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ವಾಹನದ ಮೇಲೆ ಕಲ್ಲುತೂರಾಟ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!