May 14, 2026

ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಚಿತ್ರದ ಶೂಟಿಂಗ್ ವೇಳೆ ಗಾಯ

0
amitabh-injury_d.jpg

ಹೈದರಾಬಾದ್: ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಹೈದರಾಬಾದ್‌ನಲ್ಲಿ ತಮ್ಮ ಮುಂಬರುವ ಚಿತ್ರ ‘ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ಗಾಯಗೊಂಡಿದ್ದಾರೆ.

ನಟ ತಮ್ಮ ಬ್ಲಾಗ್‌ನಲ್ಲಿ ತಮ್ಮ ಆರೋಗ್ಯದ ಬಗ್ಗೆ ಹಂಚಿಕೊಂಡಿದ್ದಾರೆ. ಸದ್ಯ ಮುಂಬೈನಲ್ಲಿರುವ ತಮ್ಮ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ. ಚಿತ್ರದ ಆಕ್ಷನ್ ಸೀಕ್ವೆನ್ಸ್ ವೇಳೆ ಬಿಗ್ ಬಿ ಗಾಯಗೊಂಡಿದ್ದರು. ದುರದೃಷ್ಟವಶಾತ್ ಈ ವೇಳೆ ಅವರ ಬಲ ಪಕ್ಕೆಲುಬು ಮುರಿದಿದೆ.

ಗಾಯದಿಂದ ಚೇತರಿಸಿಕೊಳ್ಳಲು ವಾರಗಳು ಬೇಕಾಗುವುದರಿಂದ ಚಿತ್ರದ ಶೂಟಿಂಗ್ ಅನ್ನು ರದ್ದುಗೊಳಿಸಬೇಕಾಗಿದೆ. ಅಮಿತಾಬ್ ಬಚ್ಚನ್ ಮನೆಗೆ ಹಿಂದಿರುಗುವ ಮೊದಲು ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್‌ಗೆ ಒಳಗಾಗಿದ್ದರು. ಸದ್ಯಕ್ಕೆ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!