May 14, 2026

ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿ: ಸವಾರ ಮೃತ್ಯು

0
IMG-20230306-WA0037.jpg

ಮಂಗಳೂರು: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರ ಚೌಕಿ ಸಮೀಪದ ಕೋಡಿಕಲ್ ಕ್ರಾಸ್ ಬಳಿ ಶನಿವಾರ ರಾತ್ರಿ ನಡೆದಿದೆ ಎಂದು ಮಂಗಳೂರು ಉತ್ತರ ಸಂಚಾರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ಬೈಕ್ ಸವಾರನನ್ನು ಮಹಾವೀರ್ ಸಿಂಗ್ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ತೆರಳುತ್ತಿದ್ದ ಮಹಾವೀರ್ ಸಿಂಗ್ ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದಾಗ ನಗರದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ಇನ್ನು ಗಂಭೀರ ಗಾಯಗೊಂಡಿದ್ದ ಮಹಾವೀರ್ ಸಿಂಗ್‌ರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿಮಧ್ಯೆಯೇ ಮಹಾವೀರ್ ಸಿಂಗ್ ಮೃತಪಟ್ಟರು. ಕಾರು ಚಾಲಕ ಅಮಲು ಪದಾರ್ಥ ಸೇವನೆ ಮಾಡಿದ್ದನೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!