March 11, 2026

ಬೆಂಕಿ ಅವಘಡ: ಮನೆಯಲ್ಲಿದ್ದ ತಾಯಿ, ಇಬ್ಬರು ಮಕ್ಕಳು ಸಜೀವ ದಹನ

0
image_editor_output_image-1403368576-1678166817705.jpg

ರಾಯಚೂರು: ಬೆಂಕಿ ಅವಘಡದಿಂದಾಗಿ ಮನೆಯಲ್ಲಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿರುವ ಹೃದಯ ವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ.

ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ(13), ತಾರುಣ್ಯ(5) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಅಳವಡಿಸಿದ್ದ ಎಸಿ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದ್ರೆ ಘಟನೆಗೆ ಇನ್ನೂ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!