February 1, 2026

ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ: ರಾಕೇಶ್ ಟಿಕಾಯತ್

0
image_editor_output_image625116380-1637314854413.jpg

ನವದೆಹಲಿ: ಸಂಸತ್ತಿನಲ್ಲಿ 3 ಕೃಷಿ ಮಸೂದೆ ರದ್ದಾಗುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಅವರು, ನೂತನವಾಗಿ ಜಾರಿಗೆ ತರಲಾಗಿರುವ ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರ ಈ ನಿರ್ಧಾರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಕೇಶ್ ಟಿಕಾಯತ್ ಅವರು, ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ.ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಎಂಎಸ್’ಪಿ ಜೊತೆಗೆ ರೈತರ ಇತರೆ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!