May 14, 2026

ಬಂಟ್ವಾಳ| ಮನೆಯಲ್ಲಿ ಕಾಣಿಸಿಕೊಂಡ ಬೆಂಕಿ: ಅಡುಗೆ ಕೋಣೆ, ದಾಸ್ತಾನು ಕೊಠಡಿ ಸಂಪೂರ್ಣ ಭಸ್ಮ

0
image_editor_output_image177715388-1678167653366.jpg

ಬಂಟ್ವಾಳ: ಇಲ್ಲಿನ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಮಾ. 6ರ ತಡರಾತ್ರಿ ನಡೆದಿದೆ.

ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ 2 ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಹೀಗಾಗಿ ಮನೆ ರಕ್ಷಿಸಲ್ಪಟ್ಟಿದೆ‌. ಘಟನೆಯಿಂದ ಯಾವುದೇ ಹಾನಿ ಉಂಟಾಗಿಲ್ಲ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!