ಹನುಮಂತನ ಚಿತ್ರದ ಎದುರೇ ಬಿಕಿನಿ ತೊಟ್ಟು ಮಹಿಳೆಯರ ದೇಹದಾರ್ಢ್ಯ ಸ್ಪರ್ಧೆ: BJP ವಿರುದ್ಧ ಆಕ್ರೋಶ
ಭೋಪಾಲ್: ಹನುಮಂತನ ಚಿತ್ರದ ಎದುರೇ ಬಿಕಿನಿ ತೊಟ್ಟು ಮಹಿಳೆಯರ ದೇಹದಾಢ್ಯ ಸ್ಪರ್ಧೆ ನಡೆಸಲಾಗಿದ್ದು, ಬಳಿಕ ವಿವಾದ ಭುಗಿಲೆದ್ದಿದೆ. ಈ ಬಗ್ಗೆ ರಾಜಕೀಯ ಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ.
ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ನಡೆದ ದೇಹದಾರ್ಢ್ಯ ಚಾಂಪಿಯನ್‌ಶಿಪ್‌ನಲ್ಲಿ ಮಹಿಳಾ ದೇಹದಾರ್ಢ್ಯ ಪಟುಗಳು ಭಗವಾನ್ ಹನುಮಂತನ ಚಿತ್ರದ ಎದುರು ಬಿಕಿನಿಯಲ್ಲಿ ಪ್ರದರ್ಶನ ನೀಡಿದ್ದಾರೆ.
ಘಟನೆ ಬಳಿಕ ಕಿಡಿ ಕಾರಿರುವ ಕಾಂಗ್ರೆಸ್ ಈ ಕಾರ್ಯಕ್ರಮ ಹಿಂದೂ ಭಾವನೆಗಳಿಗೆ ನೋವುಂಟು ಮಾಡಿದೆ. ಇದು ದೇವರಿಗೆ ಮಾಡಿರುವ ಅವಮಾನ, ಈ ಕೂಡಲೇ ಕಾರ್ಯಕ್ರಮದ ಆಯೋಜಕರು ಕ್ಷಮೆ ಕೇಳಬೇಕೆಂದು ಆಗ್ರಹಿಸಿದೆ.




