May 14, 2026

ಬೆಳ್ತಂಗಡಿ| ಬೈಕ್, ಸ್ಕಾರ್ಪಿಯೋ ಮಧ್ಯೆ ಅಪಘಾತ: ಬೈಕ್ ಸವಾರ ಮೃತ್ಯು

0
image_editor_output_image-489415097-1678170781051.jpg

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ನಿಡಿಗಲ್ ಎಂಬಲ್ಲಿ ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಉಂಟಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

ಮೃತ ಸವಾರನನ್ನು ಕಲ್ಮಂಜ ಗ್ರಾಮದ ಏಲ್ಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್(೫೫) ಎಂದು ಗುರುತಿಸಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.

ಇವರು ಮುಂಡಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಇಂದಿನಂತೆ ಸಂಘಕ್ಕೆ ಹೋಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!