May 11, 2026

ಚಿಕ್ಕಮಗಳೂರು: ಕಾಡ್ಗಿಚ್ಚಿಗೆ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್ ಗೆ ಬೆಂಕಿ

0
Screenshot_20230307-134306_WhatsAppBusiness.jpg

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ಕಾಡ್ಗಿಚ್ಚಿಗೆ ತತ್ತರಿಸಿದ್ದು, ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್ ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ.

ಚಿಕ್ಕಮಗಳೂರು ತಾಲೂಕಿನ ಸಿಂದಿಗೆರೆ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ.

ಬೆಂಕಿ ಆರಿಸಲು ಬಂದಿದ್ದ ಅರಣ್ಯ ಸಿಬ್ಬಂದಿ ಮೂರು ಬೈಕ್ ಗಳನ್ನು ನಿಲ್ಲಿಸಿ ಕಾರ್ಯಾಚರಣೆಗೆ ತೆರಳಿದ್ದರು. ಆದರೆ,ಇದೀಗ ಅವರ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

Leave a Reply

Your email address will not be published. Required fields are marked *

error: Content is protected !!