May 14, 2026

ಬೆಳ್ತಂಗಡಿ: ಇನ್ಸೂರೆನ್ಸ್ ಕಂಪನಿಯ ಉದ್ಯೋಗಿ ನದಿಗೆ ಹಾರಿ ಆತ್ಮಹತ್ಯೆ

0
IMG-20230307-WA0037.jpg

ಬೆಳ್ತಂಗಡಿ: ಭಾರತೀಯ ಜೇಸಿಸ್ ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಗುರುಪುರದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವರಾಗಿದ್ದ ಆಶಿತ್ ಕುಮಾರ್ ಮೂಡುಬಿದಿರೆಯಲ್ಲಿ ಮಹಾವೀರ ಎಲೆಕ್ಟ್ರಾನಿಕ್ಸ್ ಸಂಸ್ಥೆಯನ್ನು ಸ್ಥಾಪಿಸಿ ಮುನ್ನಡೆಸಿದ್ದರು.

ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಬಳಿಕ ಉದ್ಯಮವನ್ನು ಮುಚ್ಚಿ ಮಂಗಳೂರಿನಲ್ಲಿ ಖಾಸಗಿ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಕ್ಕೆ ಸೇರ್ಪಡೆ ಗೊಂಡು ಮಂಗಳೂರಿನಲ್ಲಿ ನೆಲೆಸಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಮೃತ ಆಶಿತ್ ಮೂಡುಬಿದಿರೆ ತ್ರಿಭುವನ್ ಜೇಸಿಐ ಅಧ್ಯಕ್ಷರಾಗಿ ವಲಯ 15ರ ವಲಯಾಧಿಕಾರಿಯಾಗಿ, ವಲಯಾಧ್ಯಕ್ಷರಾಗಿ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದರು.

ಕೇಳದ ಪೇಟೆ ಬಸದಿ ಜೀರ್ಣೋದ್ದಾರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ, ಮೃತರು ಪತ್ನಿ – ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!