ಪುತ್ತೂರು: ನೆರೆ ಮನೆಗೆ ಹೋಗಿ ಹಿಂದಿರುಗಿ ಬರುವಾಗ ದಾರಿ ತಪ್ಪಿ ನಾಪತ್ತೆ: ಮೂರು ದಿನಗಳ ಕಾಲ ಕಾಡಿನಲ್ಲೇ ವಾಸವಾಗಿದ್ದ ಐಸಮ್ಮ
ಪುತ್ತೂರು: ನೆರೆ ಮನೆಗೆ ಹೋಗಿ ಹಿಂದಿರುಗಿ ಬರುವಾಗ ದಾರಿ ತಪ್ಪಿ ನಾಪತ್ತೆಯಾಗಿ ಕಾಡು ಸೇರಿದ್ದ ವೃದ್ಧೆಯೋರ್ವರು ಮೂರು ದಿನಗಳ ಬಳಿಕ ಮತ್ತೆ ಮನೆ ಸೇರಿದ ಘಟನೆ ನಡೆದಿದೆ.
ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ (80)ಅವರು ಮನೆಯಿಂದ ಸುಮಾರು 4 ಕಿ.ಮೀ. ದೂರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಈ ವೃದ್ದೆಯು ಮೂರು ರಾತ್ರಿ ಹಾಗೂ ಎರಡು ಹಗಲು ಕಾಡಿನಲ್ಲಿದ್ದ ಎಲೆಗಳನ್ನೇ ತಿಂದು ಸುರಕ್ಷಿತವಾಗಿ ಮನೆ ಸೇರಿದ್ದಾರೆ.




