ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ. ಮಾಣಿಕ್ ಸಹಾ ಪ್ರಮಾಣವಚನ ಸ್ವೀಕಾರ
ಅಗರ್ತಲಾ: ಸತತ ಎರಡನೇ ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ ಮಾಣಿಕ್ ಸಹಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಡಾ ಮಾಣಿಕ್ ಸಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು.
ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದ ಕಾಂಗ್ರೆಸ್ ಮತ್ತು ಸಿಪಿಎಂ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿವೆ.




