February 3, 2026

ಚಿಕ್ಕಮಗಳೂರು: ಚುನಾವಣೆ ನೆಪದಲ್ಲಿ ಸೀರೆ ಹಂಚಿಕೆ ಮಾಡಿದ್ದ ಶಾಸಕ ಸಿ.ಟಿ. ರವಿ  ಬೆಂಬಲಿಗರು: ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ ಮತದಾರರು

0
image_editor_output_image-70666667-1678257568837.jpg

ಚಿಕ್ಕಮಗಳೂರು: ಚುನಾವಣೆ ನೆಪದಲ್ಲಿ ಮುಂಬರುವ ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ ಮಾಡಿದ್ದ ಶಾಸಕ ಸಿಟಿ ರವಿ ಬೆಂಬಲಿಗರಿಗೆ ಮತದಾರರು ಮೈಚಳಿ ಬಿಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರು ತಾಲೂಕಿನ ಭಕ್ತರಹಳ್ಳಿ, ಮಲ್ಲೇನಹಳ್ಳಿ ಭಾಗದಲ್ಲಿ ಸೀರೆ ಹಂಚಿದ್ದಾರೆ.

ಸೀರೆ ಹಂಚುವ ವೇಳೆ ಮನೆಗೆ ಬಂದ ವ್ಯಕ್ತಿಯೊಬ್ಬ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ.

ರಸ್ತೆ ಮಧ್ಯೆ ಸೀರೆಯನ್ನು ಸುಟ್ಟು ಸೀರೆ ಹಂಚಲು ಬಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ಅಲ್ಲೇ ತರಾಟೆ ತೆಗೆದುಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!