February 3, 2026

ಪುರಸಭೆಯ ಕಂದಾಯ ಅಧಿಕಾರಿ, ಗುಮಾಸ್ತ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ

0
image_editor_output_image-1463632089-1678265062967.jpg

ಚಿಕ್ಕಮಗಳೂರು: ಚಿಕ್ಕಮಗಳೂರು ಪುರಸಭೆಯ ಕಂದಾಯ ಅಧಿಕಾರಿ, ಗುಮಾಸ್ತ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು.

ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆ 8 ಸಾವಿರ ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಈ ವೇಳೆ ಬಲೆಗೆ ಸಾಕ್ಷ್ಯ ಸಮೇತ ಅಧಿಕಾರಿ ಮತ್ತು ಸಿಬ್ಬಂದಿ ಲೋಕಾಯುಕ್ತ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!