February 3, 2026

ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ: ಪಿಂಪ್ ಅರೆಸ್ಟ್, ಮತ್ತೋರ್ವ ಪರಾರಿ

0
IMG-20230308-WA0018.jpg

ಉಳ್ಳಾಲ: ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನು ಬಂಧಿಸಿದ್ದು, ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.

ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿಯಾಗಿದ್ದು, ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ತಲೆಮರಿಸಿಕೊಂಡಿದ್ದಾನೆ.

ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್. ಉಪ‌ನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ.

ಇನ್ನು ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!