ಕಾಸರಗೋಡು: ಆಟಕ್ಕೆಂದು ತೆರಳಿದ ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಆಟಕ್ಕೆಂದು ಮನೆಯಿಂದ ಹೊರ ಹೋಗಿದ್ದ ವಿದ್ಯಾರ್ಥಿಯ ಮೃತದೇಹ ಶಾಲೆಯ ಹಿಂಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕುಂಡಂಗುಳಿಗೆ ಸಮೀಪದ ಪೇರಳ ವಿನೋದ್ ಮತ್ತು ಶಾಲಿನಿ ದಂಪತಿಗಳ ಪುತ್ರ ಅಭಿನವ್ (17) ಮೃತಪಟ್ಟ ಬಾಲಕ. ಕುಂಡಂಗುಳಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ ಅಭಿನವ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಾ.7 ರಂದು ಸಂಜೆ ಶಾಲೆ ಬಿಟ್ಟು ಮನೆಗೆ ಬಂದ ಅಭಿನವ್ ಆಟವಾಡಲೆಂದು ಮನೆಯಿಂದ ಹೊರ ಹೋಗಿದ್ದನು. ತಡವಾದರೂ ಮನೆಗೆ ಹಿಂತಿರುಗದೇ ಇರುವುದನ್ನು ಗಮನಿಸಿದ ಮನೆಯವರು ಆತನಿಗಾಗಿ ಹುಡುಕಾಟ ನಡೆಸಿದಾಗ ರಾತ್ರಿ 8 ಗಂಟೆಗೆ ಅಲ್ಲೇ ಪಕ್ಕದ ಎಲ್.ಪಿ. ಶಾಲೆಯ ಹಿಂದುಗಡೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.




