February 3, 2026

ಬಂಟ್ವಾಳ: ಮನೆಯ ಬೀಗ ತೆಗೆದು ಒಳ ನುಗ್ಗಿದ ಕಳ್ಳರು, 3 ಲಕ್ಷ ರೂ. ಮೌಲ್ಯದ ನಗ, ನಗದು ದೋಚಿ ಪರಾರಿ

0
image_editor_output_image-1662788798-1678342568375.jpg

ಬಂಟ್ವಾಳ : ಮನೆಯ ಬೀಗ ತೆಗೆದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ನಗ, ನಗದು ದೋಚಿ ಪರಾರಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರಾ ಎಂಬಲ್ಲಿ ನಡೆದಿದೆ.

ಮನೆಲ್ಲಿದ್ದ ಒಟ್ಟು 3,11,550 ರೂಪಾಯಿ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ದೂರು ದಾಖಲಾಗಿದೆ.

ಸಣ್ಣ ಪ್ಲಾಸಿಕ್‌ ಬಾಕ್ಸ್‌ನಲ್ಲಿ ಇಟ್ಟಿದ್ದ ಅಂದಾಜು 10 ಗ್ರಾಂ ನ ಕಿವಿಯ ಬೆಂಡೋಳೆ , ಅಂದಾಜು 8 ಗ್ರಾಂ 3 ಉಂಗುರಗಳು, ಅಂದಾಜು 20 ಗ್ರಾಂ ತೂಕದ ಹವಳದ ಸರ ಹಾಗೂ ಅದರ ಪಕ್ಕದಲ್ಲಿ ಇಟ್ಟಿದ್ದ ಅಂದಾಜು 35 ಗ್ರಾಂ ತೂಕದ ಕರಿಮಣಿ ಸರ, ಅಂದಾಜು 20 ಗ್ರಾಂ ತೂಕದ 2 ಕೈಬಳೆಗಳು ಕಳವಾಗಿದೆ ಎಂದು ತಿಳಿದು ಬಂದಿದೆ. ಇವುಗಳ ಒಟ್ಟು ತೂಕ 93 ಗ್ರಾಂ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮನೆಯಲ್ಲಿ ಯಾರು ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯಿಂದ ಕಳ್ಳತನ ಮಾಡಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಗೆ ಮನೆಯ ಮಾಲಕಿ ರೋಹಿಣಿಯವರು ದೂರು ನೀಡಿದ್ದಾರೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!