February 3, 2026

ಚಿನ್ನ ಕಳ್ಳ ಸಾಗಾಟ: AIR INDIA ಸಿಬ್ಬಂದಿಯ ಬಂಧನ

0
image_editor_output_image-1980174080-1678348876966.jpg

ಕೊಚ್ಚಿ: ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿಯನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವುದಾಗಿ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ತಿಳಿಸಿದೆ.

ಆರೋಪಿಯನ್ನು ವಯನಾಡು ಮೂಲದ ಶಫಿ ಎಂದು ಗುರುತಿಸಲಾಗಿದ್ದು, ಬಂಧಿತನಿಂದ 1487 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಬಹ್ರೇನ್, ಕೋಯಿಕ್ಕೋಡ್ ಹಾಗೂ ಕೊಚ್ಚಿ ನಡುವಿನ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ಸಿಬ್ಬಂದಿ ಚಿನ್ನ ಸಾಗಾಣಿಕೆ ಮಾಡುತ್ತಿರುವ ಮಾಹಿತಿ ಅಧಿಕಾರಿಗಳಿಗೆ ಲಭಿಸಿತ್ತು.

ಕೈಗಳಿಗೆ ಚಿನ್ನವನ್ನು ಸುತ್ತಿಕೊಂಡು, ಅಂಗಿಯ ತೋಳುಗಳಿಂದ ಮುಚ್ಚಿ ಗ್ರೀನ್ ಚಾನೆಲ್ ಮೂಲಕ ಆರೋಪಿ ಹಾದುಹೋಗುವ ಪ್ಲಾನ್ ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!