July 14, 2026

ಶಿರಾ: KSRTC ಬಸ್ ಪಲ್ಟಿ, 25 ಮಂದಿಗೆ ಗಾಯ

0
image_editor_output_image695367486-1678429327542.jpg

ಶಿರಾ: ತಾಲ್ಲೂಕಿನ ಅರೇಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಕೆಎಸ್ಆರ್ ಟಿಸಿ ಬಸ್ ಪಲ್ಟಿಯಾಗಿ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ತಾಲ್ಲೂಕಿನ ತಾಳಗುಂದ ಗ್ರಾಮದಿಂದ ಶಿರಾಗೆ ಬರುತ್ತಿದ್ದ ಬಸ್ ಅರೇಹಳ್ಳಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಸುಮಾರು 25 ಮಂದಿ ಗಾಯಗೊಂಡಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಚಿಕ್ಕಗೂಳ ಗ್ರಾಮದ ನಾಗಮ್ಮ, ಸಿದ್ದಗಂಗಪ್ಪ ಹಾಗೂ ಬಡವನಹಳ್ಳಿ ಗ್ರಾಮದ ಹೊನ್ನಪ್ಪ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಉಳಿದವರಿಗೆ ಶಿರಾದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *

error: Content is protected !!