May 15, 2026

ಉಡುಪಿ: ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ನಿರ್ಧಾರವಿಲ್ಲ: ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ

0
IMG-20230310-WA0016.jpg

ಉಡುಪಿ: ನಾನು ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ನಿರ್ಧಾರವಿಲ್ಲ ಎಂದು ಕೇಂದ್ರ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಈ ಕುರಿತು ಅವರು, ರಾಜ್ಯದ ಚುನಾವಣೆಯನ್ನು ಎಲ್ಲ ಸಮಿತಿ, ನಾಯಕರು ಕಾರ್ಯಕರ್ತರನ್ನು ಒಟ್ಟಿಗೆ ತೆಗೆದುಕೊಂಡು ಎದುರಿಸಬೇಕೆಂಬ ನಿಟ್ಟಿನಲ್ಲಿ ಪಕ್ಷ ನನಗೆ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕಿ ಜವಾಬ್ದಾರಿಯನ್ನು ನೀಡಿದ್ದು, ಇದನ್ನು ಯಶಸ್ವಿಯಾಗಿ ನಿರ್ವಹಿಸಲು ಎಲ್ಲ ನಾಯಕರು ಸಹಕಾರಬೇಕಾಗಿದೆ ಎಂದರು.

ಇನ್ನು ಎಲ್ಲಾ ನಾಯಕರನ್ನು ಜೊತೆಯಲ್ಲಿ ಇಟ್ಟು ಕೊಂಡು ಈ ಚುನಾವಣೆಯನ್ನು ಉತ್ತಮವಾಗಿ ನಿರ್ವಹಣೆ ಮಾಡಿ ಮತ್ತೊಮ್ಮೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮ ವನ್ನು ವಹಿಸುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!