May 15, 2026

ಸುಬ್ರಹ್ಮಣ್ಯ : ಮಲಬಾರ್ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ: ಓರ್ವ ಮೃತ್ಯು, ಮತ್ತೋರ್ವನಿಗೆ ಗಾಯ

0
IMG-20230306-WA0037.jpg

ಸುಬ್ರಹ್ಮಣ್ಯ : ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯ ನಿವಾಸಿ ಪ್ರಶಾಂತ್ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಇಂಜಾಡಿ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಪ್ರಶಾಂತ್ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!