May 14, 2026

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ನಿಧನ

0
IMG-20230311-WA0006.jpg

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಆರ್‌.ಧ್ರುವನಾರಾಯಣ(61) ಅವರು ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ನಿಧನರಾಗಿದ್ದಾರೆ.

1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿ(ಜಾತ್ಯತೀತ) ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.

Leave a Reply

Your email address will not be published. Required fields are marked *

error: Content is protected !!