May 14, 2026

ವಿಟ್ಲ: ಕಾರು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

0
IMG-20230311-WA0042.jpg

ವಿಟ್ಲ: ಕಾರೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ
ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಮಸೀದಿ ಬಳಿ ತಡ ರಾತ್ರಿ ಸಂಭವಿಸಿದೆ.

ಮೈಸೂರು ಮೂಲದ ಐವರು ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಕೊಡಾಜೆ ಎಂಬಲ್ಲಿ ಈ ಘಟನೆ ಸಂಭವಿಸಿದೆ.

ಐದು ಮಂದಿಯ ಪೈಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಈ ಬಗ್ಗೆ ಗಮನಿಸಿದ ಮಸೀದಿ ಅಧ್ಯಕ್ಷ ಇಬ್ರಾಹೀಂ ಹಾಜಿ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!