May 14, 2026

ಮಂಗಳೂರು: ಪೊಲೀಸ್ ಎಂದು ಹೇಳಿ ಮಹಿಳೆಗೆ ವಂಚನೆ: ನಕಲಿ ಪೊಲೀಸನ ಬಂಧನ

0
image_editor_output_image-617340885-1678533506806.jpg

ಮಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಮಹಿಳೆಗೆ ಬೆದರಿಕೆ ಹಾಕಿ ಹಣ ಪಡೆದು ವಂಚನೆ ಎಸಗಿದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ಶಿವರಾಜ್ ದೇವಾಡಿಗ ಬಂಧಿತ ಆರೋಪಿ. ಈತ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಣ ಪಡೆದು ವಂಚಿಸಿದ್ದ.

ನೀವು ಮಸಾಜ್ ಪಾರ್ಲರ್ ನಡೆಸುತ್ತಿರುವುದುಕ್ಕೆ ಹಾಗೂ ಹಣ, ಬಂಗಾರ ಹೆಚ್ಚು ಇರಿಸಿಕೊಂಡಿರುವ ವಿಚಾರವಾಗಿ ನಮಗೆ ದೂರು ಬಂದಿದೆ.

ಪ್ರಕರಣವನ್ನು ಮುಚ್ಚಿ ಹಾಕಬೇಕಾದರೆ ಹಣ ನೀಡಬೇಕು. ಇಲ್ಲವಾದಲ್ಲಿ ನಿಮ್ಮ ಪಾರ್ಲರ್‍ ಮತ್ತು ಮನೆಗೆ ದಾಳಿ ನಡೆಸಲಾಗುವುದು ಎಂದು ಬೆದರಿಕೆ ಹಾಕಿದ್ದ.

ಅಲ್ಲದೆ ಮಹಿಳೆಗೆ ಬೆದರಿಕೆ ಹಾಕಿ ಆಕೆಯಿಂದ 38 ಸಾವಿರ ರೂಪಾಯಿಗಳನ್ನು ಪಡೆದುಕೊಂಡಿದ್ದಾನೆ.

ಘಟನೆ ಸಂಬಂಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಈ ಹಿಂದೆ ಗೃಹರಕ್ಷದ ದಳದಲ್ಲಿ ಕರ್ತವ್ಯ ನಿರ್ವಹಿಸಿದ್ದು, ಅದೇ ಸಮವಸ್ತ್ರ ಧರಿಸಿ ಮಹಿಳೆಗೆ ಬೆದರಿಕೆ ಹಾಕಿ ಪೊಲೀಸ್ ಎಂದು ನಂಬಿಸಿದ್ದ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!