March 22, 2026

ಮಂಗಳೂರು: ಅಝಾನ್ ವಿರುದ್ಧ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

0
KS_Eshwarappa_1200x768.jpeg

ಮಂಗಳೂರು: ಕರ್ನಾಟಕ ಬಿಜೆಪಿ ನಾಯಕ ಈಶ್ವರಪ್ಪ ಆಜಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್ ಗೆ ಸಿಡಿಮಿಡಿಯಾದ ಈಶ್ವರಪ್ಪ ಅಲ್ಲಾಹ ಕಿವುಡನ ಎಂದು ಪ್ರಶ್ನಿಸಿದ್ದಾರೆ. ಇದೇ ವೇದಿಕೆಯಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೂಡ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.

ಮಂಗಳೂರಿನ ಕಾವೂರಿನ ಶಾಂತಿನಗರದ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದ ಸಭೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭಾಷಣ ಮಾಡುತ್ತಿದ್ದಾಗ, ಸ್ಥಳೀಯ ಮಸೀದಿಯಿಂದ ಆಝಾನ್ ಆರಂಭವಾಗಿದೆ.

ಈ ವೇಳೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ನಿಮ್ಮೂರಿನ ಚರಂಡಿ, ರಸ್ತೆ, ಕಟ್ಟಡ ಕಟ್ಟಬೇಕೆಂದು ಸ್ವಾತಂತ್ರ್ಯ ತಂದ್ರಾ, ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು, ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ, ಇದರಲ್ಲೇನು ಅನುಮಾನ ಬೇಡ ಎಂದರು.

Leave a Reply

Your email address will not be published. Required fields are marked *

error: Content is protected !!