March 22, 2026

ಕಲ್ಲಡ್ಕ: ಕಾರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

0
image_editor_output_image-2027134512-1678685493693.jpg

ಕಲ್ಲಡ್ಕ: ಕಾರಿನೊಳಗೆ ವ್ಯಕ್ತಿಯೋರ್ವರು ಕುಳಿತ ಸ್ಥಿತಿಯಲ್ಲಿಯೇ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.

ಗೋಳ್ತಮಜಲು ಗ್ರಾಮದ ‌ಹೊಸೈಮಾರ್ ನಿವಾಸಿ ಜಗದೀಶ್ ಮೃತಪಟ್ಟ ಯುವಕ.

ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ ಕೆಲವು ವರ್ಷಗಳ ಹಿಂದೆ ವಿಡಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ.

ನಿನ್ನೆ ಬೆಳಿಗ್ಗೆ ಬಾವನ ಜೊತೆ ತರವಾಡು ಮನೆಯಲ್ಲಿ ದೈವದ ಕಾರ್ಯಕ್ಕೆ ಮಕ್ಕಳ ಜೊತೆ ಹೋಗಿದ್ದರು ಎನ್ನಲಾಗಿದೆ. ವಾಪಾಸ್ಸು ಮನೆಗೆ ಬರುವ ವೇಳೆ ಕಲ್ಲಡ್ಕ ತಲುಪಿದ್ದಾಗ ಸುಮಾರು ‌ 1.30 ಗಂಟೆಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಬಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಮನೆಗೆ ಹೋಗಿ ಎಂದು ‌ಕಳುಹಿಸಿ,ಕಾರಿನ ಸೀಟಿನಲ್ಲಿಯೇ ಮಲಗಿದ್ದರು.

ಆದರೆ ರಾತ್ರಿ ‌7 ಗಂಟೆಯಾದರೂ ಈತ ಮನೆಗೆ ಬಾರದ ಹಿನ್ನೆಲೆಯಲ್ಲಿ ಮತ್ತೆ ಬಂದು ನೋಡಿದಾಗ ಕಾರಿನ ಸೀಟಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿರುವುದು ಹೊರಗಿನಿಂದ ಕಂಡುಬಂತು.

ಕಾರಿನ ಗ್ಲಾಸ್ ಹಾಕಿ ಮಲಗಿದ್ದರಿಂದ ಕಾರಿನ ಡೋರ್ ಓಪನ್ ಮಾಡಿದಾಗ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಗಮನಕ್ಕೆ ಬಂದಿದೆ.

Leave a Reply

Your email address will not be published. Required fields are marked *

error: Content is protected !!