March 22, 2026

ಭಾರತೀಯ ಮೂಲದ ಕಿರುಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಗೆ ಆಸ್ಕರ್ ಪ್ರಶಸ್ತಿ

0
AAAABQpy_JLsPVpQMcCsaT2NmrU9tFk-U6iLiNkvwDXuwhonJgLCIM0j_sfvnMoIqn9ad6ZConwdiM9VIuB_0sWBUe1_iGgRNXVcsVzgUQU_DQnoIhEVl-joNRuU6ZEfjsNaa68VRA.jpg

ಯುಎಸ್ಎ: ಭಾರತೀಯ ಚಲನಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಆಸ್ಕರ್ ಅಕಾಡೆಮಿ ಪ್ರಶಸ್ತಿ ಗೆದ್ದಿದೆ.

ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ಗುನೀತ್ ಮೊಂಗಾ ಅವರ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ಕಿರುಚಿತ್ರ, ‘ದಿ ಎಲಿಫೆಂಟ್ ವಿಸ್ಪರರ್ಸ್’ 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದೆ.

ಈ ಚಲನಚಿತ್ರವು ಹಾಲೌಟ್, ಹೌ ಡು ಯು ಮೆಷರ್ ಎ ಇಯರ್?, ದಿ ಮಾರ್ಥಾ ಮಿಚೆಲ್ ಎಫೆಕ್ಟ್ ಮತ್ತು ಸ್ಟ್ರೇಂಜರ್ ಅಟ್ ದಿ ಗೇಟ್ ವಿರುದ್ಧ ಸ್ಪರ್ಧಿಸಿತ್ತು. ಆಸ್ಕರ್ ಪ್ರಶಸ್ತಿಯನ್ನು ಪಡೆದು ಮಾತನಾಡಿರುವ ಕಾರ್ತಿಕೆ, ಮೊದಲ ತಮ್ಮ ಆಸ್ಕರ್ ಪ್ರಶಸ್ತಿಯನ್ನು ತಾಯ್ನೆಲಕ್ಕೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಅರಣ್ಯ ಮತ್ತು ಕಾಡು ಪ್ರಾಣಿಗಳ ಮಹತ್ವವನ್ನು ಸಾರುವ ಪ್ರತಿಯೊಬ್ಬರಿಗೂ ಈ ಗೌರವ ಸಂದಿದೆ ಎಂದು ಮಾತನಾಡಿದ್ದಾರೆ.

41 ನಿಮಿಷಗಳ ಸಾಕ್ಷ್ಯಚಿತ್ರ ಇದಾಗಿದ್ದು, ಇಡೀ ಕಿರುಚಿತ್ರ ಕಾಡು ಮತ್ತು ಕಾಡಿನ ಸುತ್ತಮುತ್ತಲು ನಡೆಯುತ್ತದೆ. ಆನೆಮರಿಯ ಕಥೆಯ ಜೊತೆಗೆ ನೈಸರ್ಗಿಕ ಸೌಂದರ್ಯವನ್ನು ಮೊಗೆದು ಮೊಗೆದು ಕೊಟ್ಟಿದ್ದಾರೆ ನಿರ್ದೇಶಕರು. ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿರ್ದೇಶಕರು ಮೂಲತಃ ತಮಿಳುನಾಡಿನ ಊಟಿಯವರು. ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಅನಿಮಲ್ ಪ್ಲಾನೆಟ್, ಡಿಸ್ಕವರಿ ಚಾನೆಲ್ ಗಳಲ್ಲಿ ಕೆಲಸ ಮಾಡಿದ ಅನುಭವವೂ ಇವರದ್ದು.

Leave a Reply

Your email address will not be published. Required fields are marked *

error: Content is protected !!