February 3, 2026

RRR ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್‌ ಪ್ರಶಸ್ತಿ

0
image_editor_output_image-1648771541-1678685784324.jpg

ನವದೆಹಲಿ: ಎಸ್.ಎಸ್‌ ರಾಜಮೌಲಿ ನಿರ್ದೇಶನದ ಆರ್‌.ಆರ್‌.ಆರ್ ಸಿನಿಮಾದ ‘ನಾಟು ನಾಟು‘ ಹಾಡಿಗೆ ಆಸ್ಕರ್‌ ಪ್ರಶಸ್ತಿ ಒಲಿದಿದೆ.

ಅತ್ಯುತ್ತಮ ಮೂಲ ಹಾಡು ವಿಭಾಗದಲ್ಲಿ ಈ ಹಾಡು ಪ್ರಶಸ್ತಿ ಬಾಚಿಕೊಂಡಿದೆ.

ಇದು ಈ ಚಿತ್ರಕ್ಕೆ ಲಭಿಸಿದ ಮೂರನೇ ಅಂತಾರಾಷ್ಟ್ರೀಯ ಗೌರವವಾಗಿದೆ. ಈ ಹಿಂದೆ ‌ಗೋಲ್ಡನ್‌ ಗ್ಲೋಬ್‌ ಹಾಗೂ ಕ್ರಿಟಿಕ್‌ ಚಾಯ್ಸ್‌ ಅವಾರ್ಡ್‌ಗೆ ಈ ಹಾಡು ಪಾತ್ರವಾಗಿತ್ತು.

ಚಂದ್ರಬೋಸ್‌ ಬರೆದಿರುವ ಈ ಹಾಡಿಗೆ ಎಂ.ಎಂ ಕೀರವಾಣಿಯವರು ಸಂಗೀತ ಸಂಯೋಜನೆ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!