February 4, 2026

ಉಪ್ಪಿನಂಗಡಿ: ಮನೆಗೆ ನುಗ್ಗಿ ಬಾಲಕಿಯ ಅತ್ಯಾಚಾರಕ್ಕೆ ಯತ್ನ: ಇಬ್ಬರು ಆರೋಪಿಗಳ ಬಂಧನ

0
image_editor_output_image17998844-1678686140792.jpg

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕರಿಬ್ಬರು ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ.

ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

Leave a Reply

Your email address will not be published. Required fields are marked *

You may have missed

error: Content is protected !!