February 2, 2026

ಉಪ್ಪಿನಂಗಡಿ: ಮಗುವಿಗೆ ಜನ್ಮ ನೀಡಿದ ಎಸೆಸೆಲ್ಸಿ ವಿದ್ಯಾರ್ಥಿನಿ:
ಆರೋಪಿಯ ಬಂಧನ

0
Screenshot_2021-11-20-10-28-10-41_680d03679600f7af0b4c700c6b270fe7.jpg

ಉಪ್ಪಿನಂಗಡಿ: ಎಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ಸಹಜ ಹೆರಿಗೆ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತಎಸೆಸೆಲ್ಸಿ ಕಲಿಯುತ್ತಿರುವ ಈ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗರ್ಭಿಣಿ ಎಂಬುದು ಬೆಳಕಿಗೆ ಬಂದಿತ್ತು. ಆಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.

ಈ ಬಗ್ಗೆ ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ ತನ್ನ ಮೇಲೆ ಹಿರೆಬಂಡಾಡಿ ಗ್ರಾಮದ ಮದ್ಮೆತ್ತಿಮಾರು ಮನೆ ನಿವಾಸಿ ಕೇಶವ (34) ಎಂಬಾತ ಅತ್ಯಾಚಾರವೆಸಗಿರುವುದನ್ನು ತಿಳಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕೇಶವನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!