February 4, 2026

ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ: ಫೈರಿಂಗ್ ಮಾಡಿ ಆರೋಪಿಯ ಬಂಧನ

0
image_editor_output_image266132430-1678700241043.jpg

ಯಾದಗಿರಿ: ಪೊಲೀಸರ ಮೇಲೆ ಪಿಸ್ತೂಲ್ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಡಕಾಯಿತಿ ಗ್ಯಾಂಗ್ ಲೀಡರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಆರೋಪಿ ಮಹಮ್ಮದ್ ರಫಿಯನ್ನು ಬಂಧಿಸಲು ಪೊಲೀಸರು ತೆರಳಿದ್ದಾಗ ಆತ ಪಿಸ್ತೂಲ್ ಹಾಗೂ ಚಾಕುವಿನಿಂದ ಹೆದರಿಸಿದ್ದಾನೆ.

ಈ ವೇಳೆ ಸಿಪಿಐ ಸುನೀಲ್ ವಿ.ಮೂಲಿಮನಿ, ಪಿಸಿ ಅಬ್ದುಲ್ ಭಾಷ ಹಾಗೂ ಹರಿನಾಥರೆಡ್ಡಿಯವರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದಾರೆ. ಆಗ ಆರೋಪಿ ಮೂವರ ಮೇಲೂ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ.

ಆತ್ಮರಕ್ಷಣೆಗಾಗಿ ಸಿಪಿಐ ಸುನೀಲ್ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!