ಮಂಗಳೂರು: 13 ಕೆಜಿ ಗಾಂಜಾ ಸಹಿತ ಇಬ್ಬರು ಆರೋಪಿಗಳು ಸಿಸಿಬಿ ಪೊಲೀಸರ ವಶಕ್ಕೆ
ಮಂಗಳೂರು: ಕಂಕನಾಡಿ ರೈಲ್ವೆ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು 13 ಕೆಜಿ ಗಾಂಜಾ ಸಹಿತ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಾಣೆಮಂಗಳೂರಿನ ಅಬ್ದುಲ್ ಸಾದಿಕ್(35) ಮತ್ತು ಬೆಳ್ತಂಗಡಿಯ ಕಕ್ಕಿಂಜೆಯ ನವಾಜ್ (24) ಎಂದು ಗುರುತಿಸಲಾಗಿದೆ.
ಇನ್ನು ವಶಪಡಿಸಿಕೊಂಡ ಗಾಂಜಾ ಮೌಲ್ಯ 3,90,000 ಎಂದು ಪೊಲೀಸರು ಅಂದಾಜಿಸಿದ್ದು, ಮೊಬೈಲ್ ಗಳನ್ನೂ ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




