May 11, 2026

ಮೂಡುಬಿದಿರೆ: ಶಂಕಿತ ಡೆಂಗ್ಯೂ ಜ್ವರಕ್ಕೆ ಪಿಯುಸಿ ವಿದ್ಯಾರ್ಥಿನಿ ಬಲಿ

0
IMG-20230314-WA0003.jpg

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಶಂಕಿತ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ.

ಮಿಸ್ರಿಯಾ ಅವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ.

ಜ್ಯೋತಿನಗರದ ಮಯ್ಯದ್ದಿ -ರಮ್ಲಾತ್‌ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು.

ಇನ್ನು ವಿದ್ಯಾರ್ಥಿನಿಗೆ ಕೆಲವು ದಿನಗಳಿಂದ ಆಕೆ ವಿಪರೀತ ಜ್ವರದಿಂದ ಬಳಲುತ್ತಿದ್ದು, ಬಿಳಿ ರಕ್ತ ಕಣಗಳ ಕುಸಿತ ಸಮಸ್ಯೆ ಉಲ್ಬಣಿಸಿ ನಿಧನ ಹೊಂದಿರುವುದಾಗಿ ತಿಳಿದು ಬಂದಿದೆ.

ಈ ಕುರಿತು ಮಾಹಿತಿ ನೀಡಿರುವ ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್‌ ಭಂಡಾರಿ, ಸರಕಾರಿ ಆಸ್ಪತ್ತೆಗಳಲ್ಲಿ ಡೆಂಗ್ಯೂ ಸಹಿತ ಮಲೇರಿಯಾ ಪ್ರಕರಣಗಳು ದಾಖಲಾಗಿದ್ದಲ್ಲಿ ಕೂಡಲೇ ಮಾಹಿತಿ ಲಭಿಸುತ್ತದೆ. ಖಾಸಗಿ ಆಸ್ಪತ್ರೆಗಳಿಂದ ಮಲೇರಿಯಾ ಕೇಂದ್ರಕ್ಕೆ ವರದಿ ಬಂದ ಬಳಿಕವಷ್ಟೇ ನಮಗೆ ಮಾಹಿತಿ ಸಿಗಲು ಸಾಧ್ಯ ಮತ್ತು ಆ ಕುರಿತು ಸೂಕ್ತ ಸಮೀಕ್ಷೆ, ಪರಿಶೀಲನೆ ನಡೆಸಲು ಸಾಧ್ಯವಾಗುತ್ತದೆ. ಮಿಸ್ರಿಯಾ ಪ್ರಕರಣ ಇನ್ನಷ್ಟೇ ಮಲೇರಿಯಾ ಕೇಂದ್ರಕ್ಕೆ ವರದಿಯಾಗಬೇಕಿದೆ. ಇದು ಡೆಂಗ್ಯೂ ನಿಂದಾದ ಸಾವು ಎಂದು ದೃಢಪಟ್ಟಲ್ಲಿ ಮೂಡುಬಿದಿರೆ ತಾಲೂಕಿನಲ್ಲಿ ಇದೇ ಈ ಸಾಲಿನ ಮೊದಲ ಪ್ರಕರಣ. ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!