June 27, 2026

ಮಂಗಳೂರು: ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ: ದೂರು ದಾಖಲು

0
image_editor_output_image-58749066-1678774198636.jpg

ಮಂಗಳೂರು : ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿ ಯಾಗಿರುವ‌ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ.

ಈ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ.

ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ಸಂದೇಶದೊಂದಿಗೆ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!