March 12, 2026

ಮಂಗಳೂರು: ಕುಸಿದು ಬಿದ್ದ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣದ ಶೆಡ್: 10 ಮಂದಿ ಕೂಲಿ ಕಾರ್ಮಿಕರು ಗಾಯ

0
image_editor_output_image-469204467-1678775125489.jpg

ಮಂಗಳೂರು : ಶೆಡ್ ಕುಸಿದು ಬಿದ್ದು 10 ಮಂದಿ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಸಂಭವಿಸಿದೆ.

ನಿನ್ನೆ ತಡ ರಾತ್ರಿ 11.30 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು ಈ ಸಂದರ್ಭ ಕೂಲಿ ಕಾರ್ಮಿಕರು ಶೆಡ್‌ ನಲ್ಲಿ ಮಲಗಿದ್ದರು ಎನ್ನಲಾಗಿದೆ.

ಏಕಾಏಕಿ ಶೆಡ್‌ ನ ತಳ ಭಾಗ ಕುಸಿದು ಬಿದ್ದ ಕಾರಣ ಈ ಅನಾಹುತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!