February 3, 2026

ಮಂಗಳೂರು: ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ

0
20230314_205931.jpg

ಮಂಗಳೂರು: ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ನಡೆದ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದಲ್ಲಿ ವಿಚಾರಣಾ ಸಮಯ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಕುಂಜತ್ತಬೈಲ್ ನಿವಾಸಿ ರಾಜ ಯಾನೆ ಜಪಾನ್ ಮಂಗ ಯಾನೆ ರೋಹನ್ ರೆಡ್ಡಿ(36) ಎಂಬಾತನನ್ನು ನಗರ ಅಪರಾಧ ಪತ್ತೆದಳದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಹಲ್ಲೆ, ಕೊಲೆಯತ್ನ, ಕೊಲೆ, ದರೋಡೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ವಿಚಾರಣಾ ಸಮಯ ಹಾಜರಾಗದೆ 2017ರಿಂದ ತಲೆಮರೆಸಿಕೊಂಡಿದ್ದ. ಈತ ಬೆಂಗಳೂರಿನ ಕೋರಮಂಗಲ ಎಸ್‌ಜಿ ಪಾಳ್ಯದಲ್ಲಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಂದಲೇ ಬಂಧಿಸಿದ್ದಾರೆ.

ಈತನ ವಿರುದ್ಧ 2013ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಸ್ ಚಾಲಕ ಪ್ರಸನ್ನ ಕೊಲೆ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣ, ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಕೊಲೆ ಯತ್ನ, ಜೀವ ಬೆದರಿಕೆ ಪ್ರಕರಣಗಳು ದಾಖಲಾಗಿತ್ತು. ಆರೋಪಿಯ ವಿರುದ್ಧ ನ್ಯಾಯಾಲಯದ ಎಲ್‌ಪಿಸಿ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಮುಂದಿನ ಕ್ರಮಕ್ಕಾಗಿ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!