ಮಡಿಕೇರಿ ತಾಲೂಕಿನ ವಿವಿಧೆಡೆ ಮಳೆ
ಮಡಿಕೇರಿ: ಮಡಿಕೇರಿ ತಾಲೂಕಿನ ವಿವಿಧೆಡೆ ಮಂಗಳವಾರ ಸಾಧಾರಣ ಮಳೆಯಾಗಿದೆ. ನಾಪೋಕ್ಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಸುರಿದಿದೆ.
ಮರಗೋಡು, ಮದೆನಾಡು, ಬೆಟ್ಟಗೇರಿ, ಗಾಳಿಬೀಡು, ಭಾಗಮಂಡಲ ಮತ್ತಿತರೆಡೆ ಸಾಧಾರಣ ಮಳೆಯಾಗಿದೆ.
ಕೆಲವೆಡೆ ಆಲಿಕಲ್ಲು ಸಹಿತ ಮಳೆ ಸುರಿದ ವರದಿಯಾಗಿದೆ.
ಮಡಿಕೇರಿ ನಗರ ಮತ್ತು ಸೋಮವಾರಪೇಟೆ ಸುತ್ತಮುತ್ತ ತುಂತುರು ಮಳೆಯಾಗಿದ್ದು, ವಿರಾಜಪೇಟೆಯಲ್ಲಿ ಮೋಡ ಕವಿದ ವಾತಾವರಣವಿತ್ತು.




