August 12, 2026

ವಿಧಾನಪರಿಷತ್ ಸದಸ್ಯ  ಆರ್.ಶಂಕರ್ ಮನೆ ಮೇಲೆ ಅಧಿಕಾರಿಗಳ ದಾಳಿ

0
image_editor_output_image-327350964-1678862382772.jpg

ಹಾವೇರಿ: ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರಿನ ಬೀರಲಿಂಗೇಶ್ವರ ನಗರದ ಮನೆ ಮೇಲೆ ಮಂಗಳವಾರ ತಡರಾತ್ರಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಗೃಹ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ವಸ್ತುಗಳು ಪತ್ತೆಯಾಗಿವೆ.

ಶಂಕರ್ ಅವರ ಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ, ಶಾಲಾ ಹಾಗೂ ಪದವಿ ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್‍ಗಳನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಹಾವೇರಿ ಉಪವಿಭಾಗಧಿಕಾರಿ ದಾಖಲೆ ಪತ್ರ, ಬಿಲ್ ಮತ್ತು ಸ್ಟಾಕ್ ಚೆಕ್‍ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!