ಬಂಟ್ವಾಳ: ಶ್ರೀ ಕಾರಿಂಜೇಶ್ವರದ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿ ರಾಜ್ಯ ಸರಕಾರ ಆದೇಶ

ಬಂಟ್ವಾಳ: ಭಾರೀ ಗಣಿಗಾರಿಕೆಗೆ ನಲುಗಿ ಹೋಗಿದ್ದಜಿಲ್ಲೆಯ ಪ್ರಸಿದ್ದ ಧಾರ್ಮಿಕ ಪುಣ್ಯ ಕ್ಷೇತ್ರ ಶ್ರೀ ಕಾರಿಂಜೇಶ್ವರದ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಿ ಕೊನೆಗೂ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕ್ರಷರ್ ಚಟುವಟಿಕೆಯನ್ನು ನಿಷೇಧಿಸಲಾಗಿದೆ.
ಕಾರಿಂಜ ದೇವಾಲಯದ ಸುತ್ತಮುತ್ತ ಗಣಿಗಾರಿಕೆ ನಡೆಸುತ್ತಿರುವುದರಿಂದ ದೇವಸ್ಥಾನಕ್ಕೆ ಹಾನಿಯಾಗುತ್ತಿದೆ ಎಂದು ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆಯು ಮನವಿ, ಹೋರಾಟ ನಡೆಸಿತ್ತು.
ಗಣಿಕಾರಿಕೆ ವಿರುದ್ಧ ಪ್ರತಿಭಟನೆಗಳು ಹೋರಾಟಗಳು ನಿರಂತರವಾಗಿ ನಡೆದಿತ್ತು. ಅದರೆ ಇದೀಗ ಸರಕಾರ ಗಣಿಗಾರಿಕೆಗೆ ನಿಷೇಧದ ಅದೇಶ ಮಾಡಿದೆ