March 22, 2026

ವಿಟ್ಲ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

0
Screenshot_20230315-160051_Gallery.jpg

ವಿಟ್ಲ: ವಿವಾಹಿತ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೈರ ಕರವೀರ ಎಂಬಲ್ಲಿ ನಡೆದಿದೆ.

ಮೃತರನ್ನು ಪದ್ಮಿನಿ (35) ಎಂದು ಗುರುತಿಸಲಾಗಿದೆ. ಪದ್ಮಿನಿ ಯವರು ವಿವಾಹಿತೆಯಾಗಿದ್ದು, ಪತಿಯನ್ನು ತೊರೆದು ಪೋಷಕರ ಮನೆಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಪದ್ಮಿನಿ ಯವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಈ ಮೊದಲು ಎರಡು, ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತರು ತಂದೆ, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!