May 12, 2026

‘ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಶೀಘ್ರದಲ್ಲೇ ಬಂಧಿಸಬೇಕು’: ಡಿ.ಕೆ ಶಿವಕುಮಾರ್ ಆಗ್ರಹ

0
hr-140323-dkshi.jpg

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಇತಿಹಾಸ ತಿರುಚಲು ಉರಿಗೌಡ, ನಂಜೇಗೌಡ ದ್ವಾರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಕೆಶಿ, ನಾನು ಡಿಜೆಪಿ ಪ್ರವೀಣ್ ಸೂದ್ ಒಳ್ಳೆಯವರು, ನಿಷ್ಪಕ್ಷಪಾತ ವ್ಯಕ್ತಿ ಅಂದುಕೊಂಡಿದ್ದೆ. ಆದರೆ ಬಿಜೆಪಿಯ ಬಾಲಬಡುಕರಾಗಿ ಕೆಲಸ ಮಾಡುತ್ತಿದ್ದಾರೆ. ಆ ದ್ವಾರ ನಿರ್ಮಾಣಕ್ಕೆ ಇವರು ಹೇಗೆ ಅನುಮತಿ ಕೊಟ್ಟರು? ಎಂದು ಪ್ರಶ್ನಿಸಿದ್ದಾರೆ.

ಇನ್ನು ಇತಿಹಾಸ ತಿರುಚಲು ಬಿಜೆಪಿಯವರು ಮೊದಲಿಂದಲೂ ಪ್ರಯತ್ನಿಸುತ್ತಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್, ಶ್ರೀ ಬಾಲಗಂಗಾಧರ ಸ್ವಾಮಿಜಿ, ಶ್ರೀ ಶಿವಕುಮಾರ ಸ್ವಾಮೀಜಿ, ಹೀಗೆ ಯಾರನ್ನೂ ಬಿಡದೇ ಇತಿಹಾಸ ತಿರುಚುತ್ತಿದ್ದಾರೆ. ಈಗ ಉರಿಗೌಡ, ನಂಜೇಗೌಡರ ಹೆಸರು ತೆಗೆದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!