March 22, 2026

ಮಂಗಳೂರು: ಬಿಜೆಪಿ ಕಾರ್ಯಕರ್ತ, ಗ್ರಾಮ ಪಂಚಾಯತ್ ಸದಸ್ಯ ನೇಣು ಬಿಗಿದು ಆತ್ಮಹತ್ಯೆ

0
IMG_20230316_102021-1.jpg

ಮಂಗಳೂರು: ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ನೀರುಮಾರ್ಗದಲ್ಲಿ ಸೇವಾ ಸಿಂದು ಕೇಂದ್ರ ನಡೆಸುತ್ತಿದ್ದರು.

ಅವಿವಾಹಿತರಾಗಿರುವ ಸಂದೀಪ್ ಶೆಟ್ಟಿ ಇನ್ಶೂರೆನ್ಸ್ ಏಜೇಂಟರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. ವ್ಯಾವಹಾರಿಕ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣವೆನ್ನಲಾಗಿದ್ದರೂ, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದನ್ನು ಗಮನಿಸಿದರೆ ಆತ್ಮಹತ್ಯೆಗೆ ಬೇರೆ ಕಾರಣವನ್ನು ಪೊಲೀಸರು ನೀಡಿದ್ದಾರೆ. ಸದ್ಯಕ್ಕೆ ಡೆತ್ ನೋಟನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!