ನಟಿ ಸಂಜನಾ ಗಲ್ರಾನಿಗೆ ಕೊಲೆ ಬೆದರಿಕೆ: FIR ದಾಖಲು
ಬೆಂಗಳೂರು: ಸಿನಿಮಾ ರಂಗದಿಂದ ದೂರವಿದ್ದು, ಸದ್ಯ ಮಗುವಿನ ಪಾಲನೆ ಪೋಷನೆಯಲ್ಲಿ ಬ್ಯುಸಿಯಾಗಿರುವ ನಟಿ ಸಂಜನಾ ಗಲ್ರಾನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಸಂಜನಾಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಆರೋಪ ಮಾಡಿರುವ ಅವರು, ಬೆದರಿಕೆ ಹಾಕಿದವರು ವಿರುದ್ಧ ದೂರು ದಾಖಲಿಸಿದ್ದಾರೆ.
ಪಾರ್ಕಿಂಗ್ ವಿಚಾರವಾಗಿ ಸ್ಥಳೀಯ ನಿವಾಸಿಗಳ ಜೊತೆ ಗಲಾಟೆ ನಡೆದಿದ್ದು, ಕೊಲೆ ಮಾಡ್ತಿನಿ ಅಂತ ಬೆದರಿಕೆ ಹಾಕಿದ್ದಾರೆ ಎಂದು ಸಂಜನಾ ಇಂದಿರಾನಗರ ಠಾಣೆಗೆ ದೂರು ನೀಡಿದ್ದಾರೆ.
ಇಂದಿರಾನಗರದ ಧೂಪನಹಳ್ಳಿಯಲ್ಲಿ ವಾಸವಾಗಿರುವ ಸಂಜನಾ ಗಲ್ರಾನಿ ಮನೆ ಬಳಿ ಯಶೋಧಮ್ಮ ಹಾಗೂ ರಾಜಣ್ಣ ಎಂಬುವವರ ಮನೆಯೂ ಇದೆ. ಇವರ ಮೇಲೆಯೇ ಸಂಜನಾ ದೂರು ನೀಡಿದ್ದಾರೆ.




