March 12, 2026

ಗೀಸರ್‌ ಅನಿಲ ಸೋರಿಕೆ: ಉಸಿರುಗಟ್ಟಿ ದಂಪತಿ, 5 ವರ್ಷದ ಮಗು ದಾರುಣ ಸಾವು

0
image_editor_output_image-2113147179-1678946975633.jpg

ಜೈಪುರ: ಬಾತ್‌ ರೂಮ್‌ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್‌ ರೂಮ್‌ ಗೆ ತೆರಳಿದ್ದಾರೆ. ಈ ವೇಳೆ ಗೀಸರ್‌ ಆನ್‌ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್‌ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್‌ ಗ್ಯಾಸ್‌ ಲೀಕ್‌ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!