ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ
ಬೆಂಗಳೂರು: ಪ್ರೀತಿ ನಿರಾಕರಿಸಿ ಬೇರೊಬ್ಬ ಯುವಕನ ಜತೆ ಮದುವೆಯಾಗಲು ಮುಂದಾಗಿದ್ದ ಪ್ರೇಯಸಿ ಮೇಲೆ ಅತ್ಯಾಚಾರ ಎಸಗಿ ಉಸಿರುಗಟ್ಟಿಸಿ ಹತ್ಯೆಗೈದಿದ್ದ ಪ್ರಿಯಕರನೊಬ್ಬ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಲ್ಸನ್‌ಗಾರ್ಡನ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಲ್ಸನ್‌ಗಾರ್ಡನ್ ವಿನಾಯನಗರ ನಿವಾಸಿ ಶಾಲಿನಿ (23) ಕೊಲೆಯಾದ ಯುವತಿ.
ಕೃತ್ಯ ಎಸಗಿದ ಆಕೆಯ ಪ್ರಿಯಕರ, ಕೆ.ಪಿ.ಅಗ್ರಹಾರ ನಿವಾಸಿ ಮನೋಜ್ ಆತ್ಮಹತ್ಯೆಗೆ ಯತ್ನಿಸಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಾಣಾಪಾಯದಿಂದ ಪಾರಾಗಿ ರುವ ಆರೋಪಿಯನ್ನು ಚೇತರಿಸಿಕೊಂಡ ಬಳಿಕ ಬಂಧಿಸಲಾಗುತ್ತದೆ.
ಮಂಗಳವಾರ ರಾತ್ರಿ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.




