ನ್ಯೂಝಿಲೆಂಡ್: 7.1 ತೀವ್ರತೆಯಲ್ಲಿ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ
ನ್ಯೂಝಿಲೆಂಡ್: ನ್ಯೂಝಿಲೆಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆಯನ್ನು ನೀಡಲಾಗಿದೆ. ನ್ಯೂಝಿಲೆಂಡ್‌ನ ಕೆರ್ಮಾಡೆಕ್ ದ್ವೀಪ ಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, 7.1 ತೀವ್ರತೆಯ ಭೂಕಂಪ ಇದಾಗಿದೆ.
ಜಿಯೋಲಾಜಿಕಲ್ ಸರ್ವೆ ಈ ಬಗ್ಗೆ ಮಾಹಿತಿ ನೀಡಿದ್ದು, ಭೂಕಂಪವು 10 ಕಿ.ಮೀ ಆಳದಲ್ಲಿ ಆಗಿದೆ ಎನ್ನಲಾಗಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾದ ಕಾರಣ ಇದು ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಯುಎಸ್ ಸುಮಾಮಿ ಎಚ್ಚರಿಕೆ ವ್ಯವಸ್ಥೆ ಮಾಹಿತಿ ನೀಡಿದೆ.
ನ್ಯೂಜಿಲೆಂಡ್ ಪ್ರಪಂಚದ ಎರಡು ಪ್ರಮುಖ ಟೆಕ್ಟೋನಿಕ್ ಪ್ಲೇಟ್‌ಗಳ – ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್‌ಗಳ ಗಡಿಯಲ್ಲಿ ನೆಲೆಗೊಂಡಿರುವುದರಿಂದ ಭೂಕಂಪಗಳಿಗೆ ಗುರಿಯಾಗುತ್ತದೆ. ಇದು ರಿಂಗ್ ಆಫ್ ಫೈರ್ ಎಂದು ಕರೆಯಲ್ಪಡುವ ತೀವ್ರವಾದ ಭೂಕಂಪನ ಚಟುವಟಿಕೆಯ ವಲಯದ ಅಂಚಿನಲ್ಲಿದೆ. ನ್ಯೂಜಿಲೆಂಡ್‌ನಲ್ಲಿ ಪ್ರತಿ ವರ್ಷ ಸಾವಿರಾರು ಭೂಕಂಪಗಳು ಸಂಭವಿಸುತ್ತವೆ.




